ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ-ಖರ್ಗೆ

News Desk

ಚಂದ್ರವಳ್ಳಿ ನ್ಯೂಸ್, ಶ್ರೀನಗರ:
ಜಮ್ಮು ಕಾಶ್ಮೀರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಚುನಾವಣಾ ರ್ಯಾಲಿಯಲ್ಲಿ ಮಾಡಿದ ಭಾಷಣದ ಒಂದು ಹೇಳಿಕೆ ವೈರಲ್ ಆಗಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಮಾತು ಮುಂದುವರೆಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ ಹೇಳಿಕೆ ಸದ್ಯ ವೈರಲ್ ಆಗಿದೆ.

ಈ ಹೇಳಿಕೆಯನ್ನು ಬಾಯ್ತಪ್ಪಿನಿಂದ ಹೇಳಿದ್ರಾ? ಅಥವಾ ಉದ್ದೇಶಪೂರ್ವಕವಾಗಿ ಹೇಳಿದ್ರಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ ಎಂದು ಕೆಲವರು ಕಮೆಂಟ್ ಮಾಡುತ್ತಿದ್ದರೆ ಮತ್ತೆ ಕೆಲವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಟ್ವೀಟ್ ಮಾಡುತ್ತಿದ್ದಾರೆ.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಗುಡುಗಿದರು.

 

 

- Advertisement -  - Advertisement -  - Advertisement - 
Share This Article
error: Content is protected !!
";