ವಿದ್ಯಾರ್ಥಿ ವೇತನ ಹೆಚ್ಚಳ, ಹೋಬಳಿಗೊಂದು ವಸತಿ ಶಾಲೆ ಆರಂಭ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರೀಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಿದೆ. ಹೀಗೆ ಐದು ವರ್ಷವೂ ಕೂಡ  ವಿದ್ಯಾರ್ಥಿ ವೇತನವನ್ನು ಹಂತ ಹಂತವಾಗಿ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಮೈಸೂರಿನಲ್ಲಿ ಮಾತನಾಡಿ 750 ರೂ ವಿದ್ಯಾರ್ಥಿ ವೇತನವನ್ನು 1750 ರೂ.ಗಳಿಗೆ ಹೆಚ್ಚಿಸಲಾಗಿದೆ. ಹಾಸ್ಟೆಲ್ ಗಳಲ್ಲಿ  ಇರುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಲಭಿಸಿದಾಗ ಮಾತ್ರ ಉತ್ತಮ ಜ್ಞಾನಾರ್ಜನೆ ಮಾಡಲು ಸಾಧ್ಯ. 2024-25 ರಲ್ಲಿಯೂ ಕೂಡ ವಿದ್ಯಾರ್ಥಿ ವೇತನವನ್ನು 1850 ರೂ.ಗಳಿಗೆ ಪುನ: ಹೆಚ್ಚಿಸಲಾಗಿದೆ ಎಂದು ವಿವರಿಸಿದರು.

 ಪ್ರತಿ ಹೋಬಳಿಗೊಂದು ವಸತಿ ಶಾಲೆ ಗುರಿ ಸಾಧಿಸಲು ಬದ್ಧ-
ನಾನು ಹಣಕಾಸು ಮಂತ್ರಿಯಾಗಿದ್ದಾಗ , ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ  ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ.

  ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ಉಳಿದೆಲ್ಲ ಹೋಬಳಿಗಳಲ್ಲೂ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಹತ್ತನೆ ತರಗತಿಯಲ್ಲಿ ಓದುವ ಮಕ್ಕಳಿಗೆ ವಾರಕ್ಕೆ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಅನ್ನಭಾಗ್ಯದಡಿ 5 ಕೆಜಿ ಅಕ್ಕಿ, ಕ್ಷೀರಭಾಗ್ಯ ಕಾರ್ಯಕ್ರಮ, ಬಡಮಕ್ಕಳಿಗೆ ಶೂ ಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆ ಜಾರಿಗೆ ತರಲಾಗಿದೆ ಎಂದರು.

 

 

- Advertisement -  - Advertisement -  - Advertisement - 
Share This Article
error: Content is protected !!
";