ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರೆಗೆ ಮುಂದೂಡಲಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು https://uucms.karnataka.gov.in/Login/Index. ಮೂಲಕ ಸೆಪ್ಟೆಂಬರ್ 30,2024ರ ವರೆಗೆ ಯಾವುದೇ ದಂಡ ಶುಲ್ಕವಿಲ್ಲದೆ ಸಲ್ಲಿಸಬಹುದಾಗಿದ್ದು ಆನಂತರ ಅಕ್ಟೋಬರ್ 05, 2024ರ ವರೆಗೆ ರೂ.200 ದಂಡ ಶುಲ್ಕದೊಂದಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22961016/22131385 ಇಮೇಲ್: https://uucms. ಅಥವಾ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಇವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.