ಚಂದ್ರವಳ್ಳಿ ನ್ಯೂಸ್, ಜಮ್ಮು ಕಾಶ್ಮೀರ:
ಜಮ್ಮು ಕಾಶ್ಮೀರದ ಕಥುವಾನಲ್ಲಿ ಚುನಾವಣೆ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ್‌ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಮೇಲೆಯೇ ತೀವ್ರ ಅಸ್ವಸ್ಥಗೊಂಡ ಘಟನೆ ಜರುಗಿದೆ.
ಜಮ್ಮು ಕಾಶ್ಮೀರದ ಕಥುವಾನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಭಾಷಣ ಮಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ್‌ಖರ್ಗೆ ಅಸ್ವಸ್ಥಗೊಂಡರು. ಭಾಷಣ ಮಾಡಲಾಗದೆ ಕುಸಿಯುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್‌ನಾಯಕರು ಖರ್ಗೆ ನೆರವಿಗೆ ಧಾವಿಸಿ ನೀರು ಕುಡಿಸಿದರು.
ಸ್ವಲ್ಪ ಸಮಯದ ನಂತರ ಸುಧಾರಿಸಿಕೊಂಡ ಮಲ್ಲಿಕಾರ್ಜುನ್‌ಖರ್ಗೆ ತಮ್ಮ ಭಾಷಣವನ್ನು ಮುಂದುವರಿಸಿದರು. ವಿಶ್ರಾಂತಿ ಇಲ್ಲದೇ ನಿರಂತರವಾಗಿ ಪಕ್ಷದ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಆಯಾಸಗೊಂಡಿದ್ದರು ಎನ್ನಲಾಗಿದೆ. ಚುನಾವಣೆ ನಿಮಿತ್ತ ಹಲವು ರ‍್ಯಾಲಿಗಳಲ್ಲಿ ಭಾಗವಹಿಸಿದ್ದರಿಂದಾಗಿ ಅಸ್ವಸ್ಥಗೊಂಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕೊನೆಯ ಹಂತದ ಚುನಾವಣೆಯ ಕಸರತ್ತು ನಡೆದಿದೆ. ಅಕ್ಟೋಬರ್1ರಂದು ಮೂರನೇ ಹಂತದ ಮತದಾನವು ನಡೆಯಲಿದೆ. ಈ ಕೊನೆ ಹಂತದ ಚುನಾವಣೆಯಲ್ಲಿ 40 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.
ಕಾಂಗ್ರೆಸ್‌ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ಇದ್ದು, ಮೂರನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದೆ.
ಸೋಮವಾರದಿಂದ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಮೊದಲೆರಡು ಹಂತದ ಚುನವಾಣೆಗಳು ಶಾಂತಿಯುತವಾಗಿ ಈಗಾಗಲೇ ನಡೆದಿದೆ.
ಕೊನೆಯ ಹಂತದ ಚುನಾವಣೆ ಕೂಡ ಶಾಂತಿಯುತವಾಗಿ ನಡೆಸಲು ಪೊಲೀಸರು, ಚುನಾವಣಾ ಆಯೋಗದಿಂದ ಬಿಗಿ ಬಂದೋಬಸ್ತ್‌ವ್ಯವಸ್ಥೆ ಮಾಡಿಕೊಂಡಿದ್ದಾರೆ.