ಚಂದ್ರವಳ್ಳಿ ನ್ಯೂಸ್, ರಾಮನಗರ:
ರಾಮನಗರ ಜಿಲ್ಲೆಯ ಕನಕಪುರದಲ್ಲಿ ಆಯೋಜಿಸಿದ್ದ ಪಕ್ಷದ ಪ್ರಾಥಮಿಕ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ. ಸುರೇಶ್ ಬಾಬು ಅವರು ಮತ್ತು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಮನಗರ ವಿಭಾಗದ ಜಿಲ್ಲಾ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರಾದ ಸುರೇಶ್ ಗೌಡ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಮೇಶ್ ಗೌಡ, ಮಾಜಿ ಶಾಸಕರು ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಎ. ಮಂಜು, ರಾಜ್ಯದ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೆ.ಅನ್ನದಾನಿ,
ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್, ರಾಮನಗರ ತಾಲ್ಲೂಕು ಅಧ್ಯಕ್ಷ ಶಿವಲಿಂಗಪ್ಪ, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಜಯಮುತ್ತು, ಮುಖಂಡರಾದ ಪುಟ್ಟರಾಜು, ಚಿನ್ನಸ್ವಾಮಿ, ನಲ್ಲಹಳ್ಳಿ ಶಿವಕುಮಾರ್, ಕೊತ್ತನೂರು ನಾರಾಯಣ್, ಕಬ್ಬಾಳೆಗೌಡ, ರಾಜೇಶ್, ಸ್ಟುಡಿಯೋ ಚಂದ್ರು, ರಾಮನಗರ ಜಿಲ್ಲಾ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.