“ಕಳ್ಳನ ಮನಸ್ಸು ಹುಳ್ಳಳ್ಳಗೆ”, ಐಪಿಎಸ್ ಅಧಿಕಾರಿಯಾಗಿರಲು ಅನರ್ಹ ವ್ಯಕ್ತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿದೆ.

ಅದನ್ನು  ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು  ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದು ಜೆಡಿಎಸ್ ಟೀಕಿದೆ.

ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ನು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ? ಅದಕ್ಕೆ ಕೇಂದ್ರ ಸಚಿವರ ಕುರಿತು  ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ, ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಭೂ ವ್ಯವಹಾರವೊಂದರಲ್ಲಿ 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ..? ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್ ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ ಅಲ್ಲವೇ ಎಂದು ಜೆಡಿಎಸ್ ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..? ಎಂದು ಭ್ರಷ್ಟ ಅಧಿಕಾರಿಯನ್ನ ಪಕ್ಷ ಪ್ರಶ್ನೆ ಮಾಡಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ.

ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ, ಗೃಹ ಸಚಿವ‌ಡಾ.ಜಿ.ಪರಮೇಶ್ವರ್ ಅವರೇಕೇಂದ್ರ ಸಚಿವರಾದ  ಹೆಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಪದ ಬಳಸಿರುವ ಈ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಜೆಡಿಎಸ್ ಆಗ್ರಹ ಮಾಡಿದೆ.

ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಜೆಡಿಎಸ್ ಪಕ್ಷವು ಐಪಿಎಸ್ ಅಸೋಷಿಯೇಶನ್ ಮತ್ತು ಕೇಂದ್ರ ಗೃಹ ಸಚಿವರಿಗೆ ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.

- Advertisement -  - Advertisement -  - Advertisement - 
Share This Article
error: Content is protected !!
";