ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ವಿಚಾರಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು. ಆದರೆ ತಕ್ಷಣವೇ ಸಾವರಿಸಿಕೊಂಡು ಮಾತು ಮುಂದುವರಿಸಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ, ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿಕೆ ನೀಡಿದ್ದರು. ಖರ್ಗೆ ಅವರ ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಗೆ ಭಾನುವಾರ ರಾತ್ರಿಯೇ ಪ್ರಧಾನಿ ಮೋದಿ ಕರೆ ಮಾಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ. ವೈಯಕ್ತಿಕವಾಗಿ ಮೋದಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದು ಖರ್ಗೆ ಕೂಡ ಸಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಇನ್ನು ಇದೇ ವಿಚಾರವಾಗಿ ಕಿಡಿಕಾರಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಖರ್ಗೆ ಅವರು ತಮ್ಮ ಭಾಷಣದಲ್ಲಿ ಸಂಪೂರ್ಣ ಅನಗತ್ಯ ವಿಚಾರಗಳನ್ನು ಎತ್ತಿದ್ದಾರೆ.

ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಇದು ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ನಿರಂತರವಾಗಿ ಮೋದಿ ಅವರ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

ಪ್ರಧಾನಿ ಮೋದಿ ಮತ್ತು ನಾನು, ನಾವೆಲ್ಲರೂ ಖರ್ಗೆ ಅವರು ದೀರ್ಘ, ಆರೋಗ್ಯಕರ ಜೀವನ ನಡೆಸಲಿ ಎಂದು ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ವ್ಯಂಗ್ಯದ ರೀತಿಯಲ್ಲಿ ಹೇಳಿ ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಆದರೆ ಬಿಜೆಪಿ ಮಾತ್ರ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ತೀವ್ರ ಟೀಕೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ಭಾಷಣದ ಬಗ್ಗೆ ಅವರ ಪಕ್ಷದವರಿಂದಲೇ ಟೀಕೆ ಬಂದಿದೆ. ಖರ್ಗೆ ತಮ್ಮ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ಮೋದಿ ಅವರನ್ನು ಎಳೆದು ತಂದಿದ್ದಾರೆ. ಅವರು ಮೋದಿ ಮೇಲೆ ಎಷ್ಟು ಧ್ವೇಷವಿಟ್ಟುಕೊಂಡಿದ್ದಾರೆ ಎಂದು ಈ ಹೇಳಿಕೆಯಿಂದಲೇ ಗೊತ್ತಾಗುತ್ತದೆ ಎಂದು ಬಿಜೆಪಿ ತಿಳಿಸಿದೆ.

 

 

 

- Advertisement -  - Advertisement - 
Share This Article
error: Content is protected !!
";