ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಕ್ಟೋಬರ್ 2 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ತುಮಕೂರಿನಿಂದ ರಸ್ತೆ ಮೂಲಕ ಅಂದು ಮಧ್ಯಾಹ್ನ 2.15ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಯೋಜನೆ ಭೂ ಸ್ವಾಧೀನ ಕುರಿತು ಅಧಿಕಾರಿಗಳ ಸಭೆ ನಡೆಸುವರು.
ನಂತರ ದಾವಣಗೆರೆಗೆ ತೆರಳುವರು ಎಂದು ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.