ವಾಣಿ ವಿಲಾಸ ಸಾಗರದ ನೀರಿನ ಒಳ ಹರಿವು ದಿಢೀರ್ ಏರಿಕೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಗುರುವಾರ 120.75 ಅಡಿಗೆ ಏರಿಕೆಯಾಗಿದೆ.

ಪ್ರತಿನಿತ್ಯ 550 ಕ್ಯೂಸೆಕ್ ನೀರು ತರೀಕೆರೆ ಸಮೀಪದ ಬೆಟ್ಟದ ತಾವರೆಕೆರೆ ಪಂಪ್ ಹೌಸ್ ನಿಂದ ಲಿಫ್ಟ್ ನೀರು ಹರಿದು ಬರುತ್ತಿತ್ತು.

ಆದರೆ ಇಂದು ಸುಮಾರು 500 ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದು ಬರುತ್ತಿದ್ದು ಹೊಸದುರ್ಗ, ಕಡೂರು, ಬಿರೂರು ಸುತ್ತ ಮುತ್ತ ಉತ್ತಮ ಮಳೆಯಾಗಿರುವುದರಿಂದ ಸಾವಿರ ಕ್ಯೂಸೆಕ್ ಗಿಂತ ಹೆಚ್ಚು ನೀರು ಹರಿದು ಬರುತ್ತಿದೆ.

ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿ ದಿನ 1040 ಕ್ಯೂಸೆಕ್ ನೀರನ್ನು ತರೀಕೆರೆ ಸಮೀಪದ ಬೆಟ್ಟದ ತಾವರೆಕೆರೆಯ ಪಂಪ್ ಹೌಸ್ ನಿಂದ ಒಂದು ಪಂಪ್ ಲಿಫ್ಟ್ ಮಾಡಲಾಗುತ್ತಿದೆ.
ಹಾಗಾಗಿ ನೀರಿನ ಒಳಹರಿವು 550 ಕ್ಯೂಸೆಕ್ ಇದ್ದು ಇಷ್ಟು ನೀರು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ
120.75 ಅಡಿಗೆ ಏರಿಕೆಯಾಗಿದೆ.

ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಹರಿಯಲಿದೆ. ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.

- Advertisement -  - Advertisement -  - Advertisement - 
Share This Article
error: Content is protected !!
";