ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ 2024-25ನೇ ಸಾಲಿನ ಸೆಪ್ಟೆಂಬರ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಅಕ್ಟೋಬರ್ 14ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.