ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹಿಂದೂಸ್ತಾನ್ ಮಶೀನ್ & ಟೂಲ್ಸ್ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ವಿಶೇಷವೆಂದರೆ, ಅಲ್ಲಿನ ರೊಬೋಟಿಕ್ ಯಂತ್ರಗಳು ನನಗೆ ಹೂಗುಚ್ಛ ನೀಡಿ ಬರ ಮಾಡಿಕೊಂಡವು! ಪುಷ್ಪಮಳೆ ಸುರಿಸಿದವು!! ಇದೊಂದು ವಿಶೇಷ ಅನುಭೂತಿ ನನಗೆ.
ಬಳಿಕ ಕಾರ್ಖಾನೆಯನ್ನು ವೀಕ್ಷಿಸಿ ಕಾರ್ಮಿಕರ ಜತೆ ಸಂವಾದ ನಡೆಸಿದೆ ಎಂದು ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಮೆಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತದ ಪರಿಕಲ್ಪನೆ ಅಡಿಯಲ್ಲಿ ಕಾರ್ಖಾನೆಗೆ ಕಾಯಕಲ್ಪ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಹೆಚ್ಎಂಟಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಮತ್ತಿತರೆ ಹಿರಿಯ ಅಧಿಕಾರಿಗಳು ಜತೆಯಲ್ಲಿ ಇದ್ದರು.