ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಂಗಳೂರಿನಿಂದ ರಸ್ತೆಯ ಮೂಲಕ ಆಗಮಿಸುವ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವದ ಅಂಗವಾಗಿ
ನಗರದ ಬೃಹನ್ಮಠದಲ್ಲಿ ಆಯೋಜಿಸಲಾಗಿರುವ, ಕೃಷಿ ಮತ್ತು ಕೈಗಾರಿಕೆ ವಸ್ತುಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.