Ad imageAd image

ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಿ- ಶಾಸಕ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇಶ ಪವಿತ್ರ ಗ್ರಂಥ ರಾಮಾಯಣ ರಚಿಸಿ ಪೂರ್ವ ಇತಿಹಾಸ ಮರುಕಳಿಸುವಂತೆ ಮಾಡಿದ ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಧೀರಜ್ ಮುನಿರಾಜು  ಹೇಳಿದರು.

 ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

 ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.

 ಸಮುದಾಯದ ಹಿರಿಯ ಮುಖಂಡ, ಮುನಿಕೃಷ್ಣಪ್ಪ ಮಾತಾಡಿಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು ಪ್ರತಿಯೊಬ್ಬರೂ ಅವರ ಆದರ್ಶ  ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ ೧೭ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.

 ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

  ನಗರದ ಪ್ರಮುಖ ರಸ್ತೆಗಳಲ್ಲಿ  ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.

 ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕ ಉಮಾಪತಿ, ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";