ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.
ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿಂಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ
ಕಾಯ್ದೆ–2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.