ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ದೂರಿದೆ.
ಪ್ರತಿ ಬಸ್ಸಿಗೆ ಕೇವಲ 100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!!
ಸಚಿವ ರಾಮಲಿಂಗರೆಡ್ಡಿ ಅವರೆ, ಸಾರಿಗೆ ಸಂಸ್ಥೆ ಹಿಂದೆಂದೂ ಕಂಡು ಕೇಳರಿಯದಂತಹ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡುವ ನಿಮಗೆ ಬಸ್ಸುಗಳ ಪೂಜಾ ಖರ್ಚಿಗೆ ಹಣ ನೀಡುವ ಯೋಗ್ಯತೆ ಇಲ್ಲವೇ..?? ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.