ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಖಜಾಂಚಿ ಗಣೇಶ್ ಅಕಾಲಿಕ ನಿಧನಕ್ಕೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಿವಿ5 ಬ್ಯುರೋ ಮುಖ್ಯಸ್ಥರಾಗಿದ್ದ ಗಣೇಶ್ ಚಿಕ್ಕ ವಯಸ್ಸಿನಲ್ಲೇ ಅಗಲಿದ್ದು ತೀರಾ ದುರದೃಷ್ಟಕರ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.