ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಲು ಹಾಗೂ ಉಳಿತಾಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ‘ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆ‘ ಪರಿಚಯಿಸಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ತಿಳಿಸಿದೆ.
ಇದರಲ್ಲಿನ ಹೂಡಿಕೆಗೆ ಶೇ.7.5ರ ದರದಲ್ಲಿ ಬಡ್ಡಿ ನೀಡಲಾಗುತ್ತಿದ್ದು, ಪ್ರಸ್ತುತ 14.83 ಲಕ್ಷ ಖಾತೆಗಳಲ್ಲಿ ಒಟ್ಟು 8,630 ಕೋಟಿ ಠೇವಣಿ ಸಂಗ್ರಹವಾಗಿದೆ ಎಂದು ತಿಳಿಸಿದೆ.