ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿದೆ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದ ಗಟಾರದಲ್ಲಿ ಮುಳುಗಿರುವ ಭ್ರಷ್ಟ
A1ಆರೋಪಿ ಸಿಎಂ ಸಿದ್ದರಾಮಯ್ಯ ಸರ್ಕಾರ ಇದೀಗ ಗಾಂಜಾ ಸೇವಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಮತಾಂಧ ಕಿಡಿಗೇಡಿಗಳನ್ನು ಅಮಾಯಕರು ಎಂದು ಕೇಸ್ ವಾಪಸ್ ಪಡೆದುಕೊಂಡಿದೆ ಎಂದು ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ.

ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದಿಂದ ಜನರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಛೀಮಾರಿ ಹಾಕುತ್ತಿರುವಾಗ ವಿಷಯಾಂತರ ಮಾಡಲು

ವಾಮಮಾರ್ಗ ಹಿಡಿದು 43 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಾಮಾಜ ಘಾತುಕರನ್ನು ಸರ್ವ ಜನಾಂಗದ ಶಾಂತಿಯ ತೋಟ ಹಾಳು ಮಾಡಲು ಬಿಟ್ಟಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";