ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಅಸಾಹಯಕನಾಗಿದ್ದೇನೆ ರಾಜ್ಯದಲ್ಲಿರುವ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಕಾಂಗ್ರೆಸ್ ಶಾಸಕರೇ ಅಳಲು ತೋಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಜೆಡಿಎಸ್ ಕಿಡಿಕಾರಿದೆ.
ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ಹಾಗೂ ಮಂತ್ರಿಗಳ ವಿರುದ್ಧ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಸಾರ್ವಜನಿಕ ಸಭೆಯಲ್ಲಿ “ರೈತರನ್ನು ಬದುಕಿಸಿ” ಎಂದು ಸರ್ಕಾರಕ್ಕೆ ಗೋಗೆರೆಯುವ ದಯನೀಯ ಸ್ಥಿತಿಗೆ ಬಂದಿದ್ದಾರೆ. ರಾಜ್ಯದಲ್ಲಿ ಕಳೆದ 16 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಸರ್ಕಾರದ ಬೇಜವಾಬ್ದಾರಿ ಆಡಳಿತಗೆ ಸಾಕ್ಷಿ.
ಶಾಸಕರಿಗೆ ನಯಾಪೈಸೆ ಅನುದಾನ ನೀಡುತ್ತಿಲ್ಲ, ಒಂದೂ ಅಭಿವೃದ್ಧಿ ಯೋಜನೆಗಳಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವ ಮಾತನ್ನು ಹೇಳುತಿದ್ದಾರೆ ಎಂದರೇ ಭ್ರಷ್ಟ ಮುಖ್ಯಮಂತ್ರಿ ಮತ್ತು ಸಚಿವರು ಯಾವ ಪರಿ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ ಎಂಬುದನ್ನು ಕರ್ನಾಟಕದ ಮತದಾರರು ಅರ್ಥಮಾಡಿಕೊಳ್ಳಬೇಕು ಎಂದು ಜೆಡಿಎಸ್ ಮನವಿ ಮಾಡಿದೆ.
ರಾಜ್ಯ ಬೊಕ್ಕಸ ಬರಿದುಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಸಿದ್ದರಾಮಯ್ಯ ಸರ್ಕಾರ ಬರೀ ದಿನ ಪತ್ರಿಕೆಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿಟ್ಟಿ ಪ್ರಚಾರ ಪಡೆಯುತ್ತಾ ಜನರಿಗೆ ಮಂಕುಬೂದಿ ಎರಚುತ್ತಿದೆ.
ಈ ದುಷ್ಟ ರೈತ ವಿರೋಧಿ, ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಜೆಡಿಎಸ್ ಭವಿಷ್ಯ ನುಡಿದಿದೆ.