ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದು ಇದರಿಂದಾಗಿ ನಟನಿಗೆ ನಿರಾಶೆಯಾಗಿದೆ.

ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಆರೋಪಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಆದರೆ ನಟ ದರ್ಶನ್
, ಪವಿತ್ರಾಗೌಡ, ಇತರೆ ಆರೋಪಿಗಳಾದ ಎ11 ನಾಗರಾಜು, ಎ12 ಲಕ್ಷ್ಮಣ್ ಜಾಮೀನು ಅರ್ಜಿ ವಜಾ ಮಾಡಿದೆ.

ದರ್ಶನ್‌ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ದರ್ಶನ್​ ಅಂಡ್ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆತಂದಿದ್ದರು.

ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಕೇಸ್​ನಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ದರ್ಶನ್​, ವಿನಯ್​, ಪ್ರದೋಶ್​ ಸೇರಿದಂತೆ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";