ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಮಾರಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ರೂ.5 ಕೋಟೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಯಾತ್ರಿನಿವಾಸ, ಉದ್ಯಾನವನಗಳ ಜೊತೆಗೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಈ ಕಟ್ಟಡಗಳನ್ನು ಖಾಸಗಿ ಸಂಸ್ಥೆಗಳು ಹಸ್ತಾಂತರಿಸಿಕೊಳ್ಳಲು ಇಚ್ಚಿಸಿದ್ದಲ್ಲಿ, ಪ್ರವಾಸೋದ್ಯಮ ಇಲಾಖೆಗೆ “ಆಸಕ್ತಿಯ ಅಭಿವ್ಯಕ್ತ” Expression of Interest (EOI) ಸಲ್ಲಿಸುವಂತೆ ಸೆಪ್ಟೆಂಬರ್–2024ರ ಮಾಹೆಯ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸುವಂತೆ ಕೋರಲಾಗಿರುತ್ತದೆ. ಆದರೆ ಇಲ್ಲಿಯವರೆಗೂ ಯಾವುದೇ ಅರ್ಜಿಗಳು ಸ್ವೀಕೃತವಾಗಿರುವುದಿಲ್ಲ.
ಹಾಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು 2024ರ ನವೆಂಬರ್ 11 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆ, ಕೋಟೆ ಸಮೀಪದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.