ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ವಾಲ್ಮೀಕಿ ವಿದ್ಯಾವರ್ಧಕ ಸಂಘ ಮತ್ತು ಜಿಲ್ಲಾ ನಾಯಕ ಮಹಿಳಾ ಸಮಾಜ, ಶಬರಿ ಮಹಿಳಾ ಪತ್ತಿನ ಸಹಕಾರ ಸಂಘ ಹಾಗೂ ತುಮಕೂರು ವಾಲ್ಮೀಕಿ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ವಾಲ್ಮೀಕಿ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಎಂಪ್ರೆಸ್ ಪ.ಪೂ. ಕಾಲೇಜು ಸಭಾಂಗಣದಲ್ಲಿ ಅ. 20 ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭದ ದಿವ್ಯ ಸಾನ್ನಿಧ್ಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ವಹಿಸುವರು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸುವರು.
ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಸಿ. ಪುರುಷೋತ್ತಮ್ ಅಧ್ಯಕ್ಷತೆ ವಹಿಸುವರು. ಪ್ರತಿಭಾ ಪುರಸ್ಕಾರವನ್ನು ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಮರಳೂರು ಮಾಜಿ ಛೇರ್ಮನ್ ಭೀಮಯ್ಯ, ಮಾಜಿ ಶಾಸಕ ಸಾ. ಲಿಂಗಯ್ಯ, ಮಾಜಿ ಮೇಯರ್ ಬಿ.ಜಿ. ಕೃಷ್ಣಪ್ಪ, ಜಿ.ಪಂ. ಮಾಜಿ ಸದಸ್ಯ ರಾಮಚಂದ್ರಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ.ಆರ್.ರಾಜಕುಮಾರ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಹೆಚ್ಚುವರಿ ನಿರ್ದೇಶಕ ಕೆ.ಎನ್.ಗಂಗಾಧರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.