ಅ.21 ರಿಂದ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ ೨೧ ರಿಂದ ನಿಗಧಿಪಡಿಸಿದ ದಿನಾಂಕದಂದು ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

     ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.

ಅಕ್ಟೋಬರ್ ೨೧ರಂದು ಜಿಲ್ಲೆಯ ತುಮಕೂರು ತಾಲ್ಲೂಕು ಬೆಳ್ಳಾವಿ, ತಿಪಟೂರು ತಾಲ್ಲೂಕು ಈಚನೂರು ಹಾಗೂ ಕೊರಟಗೆರೆ ತಾಲ್ಲೂಕು ತೋವಿನಕೆರೆ  ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";