ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೂ ಉಪಚುನಾವಣೆ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ .4 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 11ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.

ನವೆಂಬರ್ 12ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನವೆಂಬರ್ 14 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 23ರಂದು ಮತದಾನ ನಡೆಯಲಿದ್ದು, ಅಗತ್ಯ ವೆನಿಸಿದರೆ ನವೆಂಬರ್ 25ರಂದು ಮರು ಮತದಾನ ನಡೆಯಲಿದೆ.

ನವೆಂಬರ್ 26ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ  ನವೆಂಬರ್ 4 ರಿಂದ 26 ರವರೆಗೆ ಜಾರಿಯಲ್ಲಿರುತ್ತದೆ.

ಅರ್ಹ ಮತದಾರರು  ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಯಾವೊಬ್ಬ ಅಭ್ಯರ್ಥಿಯ ಪರವಾಗಿ ತನ್ನ ಮತವನ್ನು ಚಲಾಯಿಸಲು ಇಚ್ಛಿಸದಿರುವ ಸಂದರ್ಭದಲ್ಲಿ ಆತನುNone of the above (NOTA)” (ಮೇಲಿನ ಯಾರೊಬ್ಬರಿಗೂ ಇಲ್ಲ) ಎಂದು ಮತಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಭಾವಚಿತ್ರವಿರುವ ಮತಪತ್ರ:
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂದೇ ವಾರ್ಡಿನಲ್ಲಿ ಒಂದೇ ಹೆಸರಿನ ಅಭ್ಯರ್ಥಿಗಳು ಸ್ಪರ್ಧಿಸುವ ಸಂದರ್ಭಗಳಿರುವುದರಿಂದ, ಅಭ್ಯರ್ಥಿಗಳನ್ನು ಗುರುತಿಸಲು ಮತಪತ್ರದಲ್ಲಿ ಅವರ ಹೆಸರಿನ ಮುಂದೆ ಅವರ ವೃತ್ತಿ ಅಥವಾ ವಿಳಾಸ ಇತ್ಯಾದಿಗಳನ್ನು ತೋರಿಸಲಾಗುತ್ತದೆ.

ಆದರೂ ಸಹ ಮತದಾರನಿಗೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಮತಪತ್ರದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಇತ್ತೀಚಿನ ಭಾವಚಿತ್ರ ಮುದ್ರಿಸುವಂತೆ ಕ್ರಮ ಕೈಗೊಳ್ಳಲಾಗಿದೆ.

ಘೋಷಣಾ ಪತ್ರ / ಪ್ರಮಾಣ ಪತ್ರ: ಮತದಾರನಿಗೆ ಅಭ್ಯರ್ಥಿಯ ಪೂರ್ವಾಪರಗಳನ್ನು ತಿಳಿದುಕೊಳ್ಳಲು, ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಯು ನಾಮಪತ್ರದೊಂದಿಗೆ, ತನ್ನ ಹಿನ್ನೆಲೆ, ಚರಾಸ್ತಿ ಮತ್ತು ಸ್ಥಿರಾಸ್ತಿಗಳ ವಿವರಗಳು, ತನ್ನ ಸ್ವವಿವರ, ವಿದ್ಯಾರ್ಹತೆ, ಆದಾಯದ ಮೂಲಗಳನ್ನು ಪರಿಷ್ಕø ನಮೂನೆಯಲ್ಲಿ ಘೋಷಣಾ ಪತ್ರ / ಪ್ರಮಾಣ ಪತ್ರ  ಸಲ್ಲಿಸಬೇಕಾಗಿರುತ್ತದೆ.

ದಿನಾಂಕ: 19/11/2024 ಎರಡನೇ ಶನಿವಾರವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ ಅಡಿ ಸಾರ್ವತ್ರಿಕ ರಜಾದಿನವೆಂದು ಘೋಷಿಸಲ್ಪಟ್ಟಿದ್ದು, ಸದರಿ ದಿನದಂದು ಯಾವುದೇ ನಾಮಪತ್ರವನ್ನು ಸ್ವೀಕರಿಸುವಂತಿಲ್ಲ. ಚುನಾವಣಾ ಅಧಿಸೂಚನೆ: ಜಿಲ್ಲಾಧಿಕಾರಿಗಳು, ಆಯೋಗವು ಆದೇಶಿಸಿದ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ, ಚುನಾವಣಾ ಅಧಿಸೂಚನೆಯನ್ನು ಹೊರಡಿಸುವರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳ ಉಪ ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";