ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಭರತ್ ಬಸವರಾಜ್ ಬೊಮ್ಮಾಯಿ ಹಾಗೂ ಬಂಗಾರು ಹನುಮಂತು ಅವರುಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಉಪಚುನಾವಣೆ ನಡೆಯುವ ಮೂರೂ ಕ್ಷೇತ್ರಗಳಲ್ಲಿ ಎನ್.ಡಿ.ಎ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಲು ಪಕ್ಷದ ಕಾರ್ಯಕರ್ತರು ಈ ಕ್ಷಣದಿಂದಲೇ ಸಮರ ಸೇನಾನಿಗಳಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಅವರು ವಿನಂತಿಸಿದ್ದಾರೆ.
ಸರಣೀ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ, ಜನವಿರೋಧಿ ಆಡಳಿತದ ಕಾರಣದಿಂದಾಗಿ ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಈ ಚುನಾವಣಾ ಫಲಿತಾಂಶ ತಕ್ಕ ಪಾಠ ಕಲಿಸಲಿದೆ. ಮೂರೂ ಕ್ಷೇತ್ರಗಳ ಮತದಾರ ಬಂಧುಗಳು ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಆಶೀರ್ವಾದಿಸಬೇಕೆಂದು ಅವರು ಟ್ವೀಟ್ ಮಾಡಿ ವಿನಂತಿಸಿದ್ದಾರೆ.