ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಯಕ ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಶನಿವಾರ ಜಯನಗರದ ಅಪೋಲೋ ಆಸ್ಪತ್ರೆಗೆ ಸರೋಜಾ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement - 

ಭಾನುವಾರ ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತಗೆದುಕೊಂಡು ಹೋಗಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಸುದೀಪ್ ತಾಯಿ ನಿಧನ ಸುದ್ದಿಗೆ ಚಿತ್ರರಂಗ ಹಾಗು ಫ್ಯಾನ್ಸ್ ಕಂಬನಿ ಮಿಡಿದಿದೆ.
 

- Advertisement - 

Share This Article
error: Content is protected !!
";