ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕಿನಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ, ಅಲಂಕಾರಿಕ ಗಿಡಗಳು ಕೊಳೆಯುತ್ತಿವೆ, ಬೆಳೆ ನಾಶದಿಂದ ಕಂಗಲಾದ ರೈತರು ಅಲಂಕಾರಿಗಳ ಹೂಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ನಾರಸಿಂಹನಹಳ್ಳಿಯಲ್ಲಿ ನೆಡೆದಿದ್ದು ನಾರಸಿಂಹನಹಳ್ಳಿಯ ಶ್ರೀಕಾಂತ್ ಮತ್ತು ನರಸೇಗೌಡ ಹೂವಿನ ಬೆಳೆದಿದ್ದರು, ನಿರಂತರ ಮಳೆಯಿಂದಾಗಿ ಕೊಳೆತ ಹೂ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಒಂದು ಎಕರೆ ಜಮೀನಿನಲ್ಲಿ ಸುಮಾರು 8 ಲಕ್ಷ ರೂಪಾಯಿ ಹಣ ಖರ್ಚು ಮಾಡಿ ಸಿಲೋಷಿಯ ಜಾತಿಯ ಹೂ ಬೆಳೆದಿದ್ದು.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೇರೆಡೆಗೆ
ಹೂಗಳನ್ನು ರಫ್ತು ಮಾಡಲಾಗುತ್ತಿದ್ದು,ಬಾಂಬೆ, ಕಲ್ಕತ್ತಾ, ಹೈದರಾಬಾದ್, ಮುಂಬೈ ಸೇರಿದಂತೆ ವಿವಿಧ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿತ್ತು ಬೆಳೆ ಸಂಪೂರ್ಣ ಹಾಳಾಗಿದ್ದು ಈ ಕುರಿತು ಸ್ಥಳೀಯ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಯಾರು ಭೇಟಿ ನೀಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.