ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಜಮೀರ್ ಬ್ರಿಗೇಡ್‌ ಖಂಡನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವಕ್ಫ್‌ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ  ಜಮೀರ್ ಅಹಮದ್‌ಖಾನ್‌ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‌ಖಾನ್ ಬ್ರಿಗೇಡ್‌ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್‌ಖಾನ್‌ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‌ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್‌ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

- Advertisement -  - Advertisement - 
Share This Article
error: Content is protected !!
";