ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‍ಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ ವತಿಯಿಂದಹದಿನಾಲ್ಕು ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರು ರೂ.10-00 ಸಂದಾಯಿಸಿ ಅರ್ಜಿ ಫಾರಂಗಳನ್ನು ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವ ವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು560 065 ಇವರಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 25 ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23513370 ಗೆ ಸಂರ್ಪಕಿಸಬಹುದು ಎಂದು ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";