6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಜಾನುವಾರು ನಿಯಂತ್ರಣ ಕಾರ್ಯಕ್ರಮದಡಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಅಭಿಯಾನ ಇದೇ .21 ರಿಂದ ಪ್ರಾರಂಭವಾಗಿದ್ದು, ನವೆಂಬರ್ 20ರವರೆಗೆ ನಡೆಯಲಿದೆ.

ಜಿಲ್ಲೆಯಾದ್ಯಂತ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ 3390 ಬ್ಲಾಕ್ಗಳಲ್ಲಿ 291 ಲಸಿಕಾದಾರರು ನಿರಂತರವಾಗಿ 30 ದಿನಗಳ ಅವಧಿಯಲ್ಲಿ ಜಿಲ್ಲೆಯ 991 ಗ್ರಾಮಗಳಲ್ಲಿ 338907 ಜಾನುವಾರುಗಳಿಗೆ ನಿಗಧಿತ ದಿನಗಳಂದು ಲಸಿಕಾದಾರರು ಪ್ರತಿ ಮನೆಮನೆಗೆ ತೆರಳಿ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ.

ರೈತಭಾಂದವರು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";