ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಹಿನ್ನಲೆಯಲ್ಲಿ ಅ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಕನ್ನಡ ಪರ ಸಂಘಟನೆಯ ಮುಖ್ಯಸ್ಥರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.