ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದು
ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಶವಗಳನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್‌ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ವೇಳೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎನ್ನಲಾಗಿದೆ.

 

 

- Advertisement -  - Advertisement - 
Share This Article
error: Content is protected !!
";