ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನವೆಂಬರ್ 01 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ. 01 ರಂದು ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಜಿಲ್ಲೆಯ ಸಾಧಕರಿಗೆ ಸನ್ಮಾನಿಸಲು, ಬುಧವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು.
ಅದರಂತೆ, ಕ್ರೀಡೆ, ರಂಗಭೂಮಿ, ಜಾನಪದ, ಕಲೆ ಮತ್ತು ಸಾಹಿತ್ಯ, ಸಮಾಜ ಸೇವೆ, ಮಾಧ್ಯಮ, ಸಂಗೀತ, ವೈದ್ಯಕೀಯ ಮತ್ತು ಸಂಶೋಧನೆ, ಕೃಷಿ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯೊಂದಿಗೆ ತಮ್ಮ ಸಾಧನೆಯ ವಿವರಗಳು, ಪೂರಕವಾದ ಛಾಯಾಚಿತ್ರಗಳು, ಪತ್ರಿಕಾ ವರದಿಗಳು ಹಾಗೂ
ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ ಆವರಣ, ಚಿತ್ರದುರ್ಗ ಇವರಿಗೆ ಅ. 28 ರಂದು ಮಧ್ಯಾಹ್ನ 12 ಗಂಟೆಯ ಒಳಗಾಗಿ ಸಲ್ಲಿಸಬೇಕು ಎಂದು ಕನ್ನಡ ರಾಜ್ಯೋತ್ಸವ ಸಮಾರಂಭ ಸನ್ಮಾನ ಉಪಸಮಿತಿಯ ಅಧ್ಯಕ್ಷರು ಹಾಗೂ ಉಪವಿಭಾಗಾಧಿಕಾರಿ ಕಾರ್ತಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.