ಅಪಘಾತ ತಡೆಗಟ್ಟಲು ಪಪ್ಪಿ ಸ್ಟೂಡೆಂಟ್ ವಿಂಗ್ ಅಧಿಕಾರಿಗಳಿಗೆ ಮನವಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಎಸ್.ಆರ್.ಎಸ್ ಕಾಲೇಜಿನ ಪ್ರಥಮ ವರ್ಷದ ಕಾಮರ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚೇತನ್(19) ಅಪಘಾತ ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಈ ಘಟನೆಯಿಂದ ಪ್ರೇರಿತರಾಗಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಡಿವೈಎಸ್ಪಿ ಕಚೇರಿ, ಬಡಾವಣೆ ಪೊಲೀಸ್ ಠಾಣೆಗೆ ಪಪ್ಪಿಸ್ ಸ್ಟೂಡೆಂಟ್ ವಿಂಗ್ ನ ವಿದ್ಯಾರ್ಥಿಗಳು ಭೇಟಿ ನೀಡಿ ಹೆದ್ದಾರಿಗಳಲ್ಲಿ ವಾಹನಗಳ ದಟ್ಟಣೆ ಸಾಕಷ್ಟು ಇದ್ದು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಟ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರ ಪ್ರದೇಶ ಹಾಗೂ ಹೊರವಲಯದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ಶಾಲಾ-ಕಾಲೇಜು ಮಟ್ಟಗಳಲ್ಲಿ ಕಾರ್ಯಗಾರ ಮಾಡಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

- Advertisement -  - Advertisement - 
Share This Article
error: Content is protected !!
";