ಎನ್ ಡಿಎ ನಾಯಕರಿಗೆ ಅಭಿನಂದಿಸಿದ ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯ NDA ಮೈತ್ರಿಕೂಟದ ಅಭ್ಯರ್ಥಿಯಾಗಿ ನನ್ನನ್ನು ಒಮ್ಮತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಮೈತ್ರಿಕೂಟದ ಎಲ್ಲಾ ನಾಯಕರಿಗೆ ನನ್ನ ವಿನಯಪೂರ್ವಕ ಪ್ರಣಾಮಗಳು ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದಿಂದ ನಾನು ಕಣಕ್ಕೆ ಇಳಿದಿದ್ದೇನೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ, ಕೇಂದ್ರ ಸಚಿವರು ಮತ್ತು ಜೆಡಿಎಸ್ ಅಧ್ಯಕ್ಷರಾದ  ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನನ್ನ ಉಮೇದುವಾರಿಕೆ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನನ್ನನ್ನು ಹರಸಿದ ಮಿತ್ರಪಕ್ಷಗಳ ಎಲ್ಲಾ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ನಿಖಿಲ್ ತಿಳಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ಬಾಬು, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್‌, ಶಾಸಕರಾದ ಶರಣಗೌಡ ಕಂದಕೂರ, ಎ.ಮಂಜು,  ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಸುರೇಶ್‌ಗೌಡ,  ಹೆಚ್.ಎಂ.ರಮೇಶ್ ಗೌಡ ಅವರು ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ಪಕ್ಷಗಳ ಪ್ರಮುಖ ಅನೇಕ ಮುಖಂಡರು ಭಾಗವಹಿಸಿದ್ದರು ಎಂದು ನಿಖಿಲ್ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";