ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಯಿತು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸುವುದು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವುದು, ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದು ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ಚರ್ಚಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಹ ಅಧ್ಯಕ್ಷ ಡಾ. ಎಲ್ ಹನುಮಂತಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.