ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಕ್ಫ್ ಮಂಡಳಿ ರೈತರು, ದಲಿತರು, ಮುಸ್ಲಿಂ ರೈತರ ಭೂಮಿ ಕಬಳಿಸಲು ತಹಶೀಲ್ದಾರ್ ಮೂಲಕ ರೈತರಿಗೆ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿ, ಇದು ರಾಜ್ಯ ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ಸರ್ಕಾರ ಹಾಗೂ ವಕ್ಫ್‌ಮಂಡಳಿಯಿಂದ ಜಂಟಿಯಾಗಿ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಬಡ ರೈತರ ಜಮೀನನ್ನು ಕಬಳಿಸಲು ಸರ್ಕಾರ ಮತ್ತು ವಕ್ಫ್ ಮಂಡಳಿ ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಅಶೋಕ್ ಆಗ್ರಹ ಮಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಸರ್ಕಾರ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ.
ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಮಂಡಳಿ ಯೋಜನೆ ರೂಪಿಸಿದೆ. ಇದಕ್ಕೆ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆಂದು ವಿಪಕ್ಷ ನಾಯಕ ಅಶೋಕ್ ಆರೋಪಿಸಿದರು.
ವಕ್ಫ್ ಮಂಡಳಿಗೆ ಭೂಮಿ ನೀಡುವ ವಿಚಾರವಾಗಿ ಸರ್ಕಾರದಿಂದಲೇ ಅಧಿಕೃತ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.
ಸಚಿವ ಜಮೀರ್ ಅಹ್ಮದ್ ಲ್ಯಾಂಡ್ ಜಿಹಾದ್ ಮಾಡುವ ಮೂಲಕ ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂಆಗುವ ಯೋಜನೆ ರೂಪಿಸಿದ್ದಾರೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತಿದೆ. ಈಗ ಸಚಿವ ಜಮೀರ್ ಅಹಮದ್ ಭೂಮಿ ಕೊಳ್ಳೆ ಹೊಡೆದು ವಕ್ಫ್ ಮಂಡಳಿಗೆ ಸೇರಿಸಲು ತಂತ್ರ ಮಾಡಿದ್ದಾರೆ ಎಂದು ಆರೋಪಿಸಿದರು.
ವಿಜಯಪುರದ ರೈತರು ವಕ್ಫ್ ಮಂಡಳಿ ಹೆಸರಿನಲ್ಲಿ ರೈತರ ಆಸ್ತಿಯನ್ನು ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ಸರ್ಕಾರದ ದೌರ್ಜನ್ಯ ವಿರೋಧಿಸಿ ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಆರಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ವಿಪಕ್ಷ ನಾಯಕ ಅಶೋಕ್ ಕಿಡಿಕಾರಿದ್ದಾರೆ.