ವೋಲ್ವೋ ಐರಾವತ ಕ್ಲಬ್‌ಕ್ಲಾಸ್‌ ಬಸ್ ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್‌ಕ್ಲಾಸ್‌2.0 ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ಆರ್.ಎಲ್.ರಾಮಲಿಂಗರೆಡ್ಡಿ ಅವರು ಚಾಲನೆ ನೀಡಿದರು.

- Advertisement - 

ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣು ಮಕ್ಕಳು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು.

- Advertisement - 

ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್‌ಮಾಡಿ ಟ್ವೀಟ್‌ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್‌ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ.

ವೋಲ್ವೋ ಬಸ್‌ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್‌ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

- Advertisement - 

Share This Article
error: Content is protected !!
";