ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ., ಬಿ.ಕಾಂ, ಬಿಸಿಎ, ಬಿಎಸ್ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್ ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ,

ಪಿಹೆಚ್.ಡಿ ಪದವಿ, ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಅಭಿನಂದಿಸಲು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 10ರೊಳಗೆ ತಮ್ಮ ಸ್ವವಿವರದ ಅರ್ಜಿಯ ಜೊತೆ ಪೂರಕ ದಾಖಲಾತಿಗಳೊಂದಿಗೆ ಅಂಚೆ ಮೂಲಕ ಅಥವಾ ನೇರವಾಗಿ ಡಾ.ಹೆಚ್.ಗುಡ್ಡದೇಶ್ವರಪ್ಪ,ಅಧ್ಯಕ್ಷರು,  

ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ, ಮಾತೃ ಕೃಪ, ಎಂ..ಜಿ 12/, ಕೆ.ಹೆಚ್.ಬಿ ಕಾಲೋನಿ, 3ನೇ ಹಂತ, ಸಾಧಿಕ್ ನಗರ ರಸ್ತೆ, ಚಿತ್ರದುರ್ಗ, ದೂರವಾಣಿ ಸಂಖ್ಯೆ 9448232934 ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.

 ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರಬಾಬು ದೂರವಾಣಿ ಸಂಖ್ಯೆ 7483639318 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಗುಡ್ಡದೇಶ್ವರಪ್ಪ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";