ನವೆಂಬರ್-1 ರಂದು 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಂತರ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶವನ್ನು ನೀಡಲಿರುವರು.

ಸಮಾರಂಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಕೇಂದ್ರ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಕಾರ್ಮಿಕ ಹಾಗೂ ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರ ಡಿ.ಕೆ. ಶಿವಕುಮಾರ್ ಅವರು ಘನ ಉಪಸ್ಥಿತರಿರುವರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿರುವರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಲಿದ್ದು, ಸಚಿವರು, ಶಾಸಕರು ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿರಿರುವರು.  

ವಿವಿಧ ಶಾಲೆಗಳಿಂದ ಸುಮಾರು 14000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರ ಸಮ್ಮುಖದೊಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.  

 

 

- Advertisement -  - Advertisement -  - Advertisement - 
Share This Article
error: Content is protected !!
";