ಡಿಕೆ ಶಿವಕುಮಾರ್ ಗೆ ತರಾಟೆ ತೆಗೆದುಕೊಂಡ ಮಲ್ಲಿಕಾರ್ಜುನ್ ಖರ್ಗೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ
ಯೋಜನೆ ಪರಿಶೀಲಿಸುತ್ತೇವೆ ಎಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆಯಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಏನಪ್ಪಾ ಶಕ್ತಿ ಯೋಜನೆ ಬಗ್ಗೆ ಏನೋ ಹೇಳಿದ್ದೀಯಲ್ಲ ಎಂದು ಡಿಕೆ ಶಿವಕುಮಾರ್ ಕಡೆಗೆ ತಿರುಗಿ ಖರ್ಗೆ ಪ್ರಶ್ನಿಸಿದರು.

ಅದಕ್ಕೆ ಡಿ.ಕೆ. ಶಿವಕುಮಾರ್, ನಾನು ಏನೂ‌ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ಓದಿಲ್ವಾ, ನಾನು ಓದಿದ್ದೇನೆ. ಪೇಪರ್​ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದು ಖರ್ಗೆ ಪ್ರಶ್ನಿಸಿದರು.

ಪತ್ರಿಕೆಗಳಲ್ಲಿ ನಿನ್ನದೇ ಹೆಸರು ಬಂದಿದೆ. ಯಾವುದೋ ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯ ಅಂತ ಹಾಸ್ಯಮಯವಾಗಿ ಖರ್ಗೆ ಡಿಕೆಶಿ ಅವರನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆ ನೋಡಿದ ಮೇಲೆ ಮಹಾರಾಷ್ಟ್ರದಲ್ಲಿ ನಾನು, ಕರ್ನಾಟಕದಲ್ಲಿ ಐದು ಗ್ಯಾರಂಟಿ ಕೊಟ್ಟಿದ್ದೀವಿ ಅಂತ ಹೇಳಿದ್ದೆ. ಈಗ ನೀವು ಒಂದು ಗ್ಯಾರಂಟಿ ಬಿಡಿ ಎಂದು ಹೇಳಿದ್ದೀರಿ ಎಂದು ಖರ್ಗೆ ವ್ಯಂಗ್ಯವಾಡಿದರು.

ಪಕ್ಕದಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

- Advertisement -  - Advertisement -  - Advertisement - 
Share This Article
error: Content is protected !!
";