ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಖಾಸಗಿ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಎನ್.ಮೋಹನ್ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನ.೪ ರಿಂದ ೧೩ ರವರೆಗೆ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿ ಎನ್.ಮೋಹನ್‌ಗೆ ಶಾಲೆಯಲ್ಲಿ ಗೌರವಿಸಿ ಜಯಶಾಲಿಯಾಗಲೆಂದು ಹಾರೈಸಲಾಯಿತು.
ಜ್ಞಾನವಿಕಾಸ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಗೀತಮ್ಮ ಎಸ್. ಕಾರ್ಯದರ್ಶಿ ಮನೋಜ್ ಎಂ. ಆಡಳಿತ ಮಂಡಳಿ ಸದಸ್ಯರು ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕ ವೃಂದ, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.