ಒನಕೆ ಓಬವ್ವ ಜಯಂತಿ ಕರಪತ್ರ ಬಿಡುಗಡೆ ಮಾಡಿದ ನಿರಂಜನಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಇದೆ ತಿಂಗಳ ೧೧ ರಂದು ಚಿತ್ರದುರ್ಗದಲ್ಲಿ ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಛಲವಾದಿ ಜನಾಂಗದ ಮುಖಂಡರು ಭಾನುವಾರ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಕರಪತ್ರ ಬಿಡುಗಡೆಗೊಳಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಛಲವಾದಿ ಸಮಾಜದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ನಡೆಯುವ ಒನಕೆ ಓಬವ್ವ ಜಯಂತಿಗೆ ಛಲವಾದಿ ಜನಾಂಗದವರೆಲ್ಲಾ ಸೇರಿ ಕೈಜೋಡಿಸಿ ಊರಿನ ಹಬ್ಬದ ರೀತಿಯಲ್ಲಿ ಆಚರಿಸಿ ಒನಕೆ ಓಬವ್ವಳ ಸಾಹಸ, ದಿಟ್ಟತನವನ್ನು ಮುಂದಿನ ಪೀಳಿಗೆಗೆ ಪರಿಚಯಿಸೋಣ ಎಂದರು.

ಅಂದು ಬೆಳಿಗ್ಗೆ ೮-೩೦ ಕ್ಕೆ ಹೊಳಲ್ಕೆರೆ ರಸ್ತೆಯಲ್ಲಿರುವ ಒನಕೆ ಓಬವ್ವ ದೇವಸ್ಥಾನದಿಂದ ಪುಷ್ಪಾಲಂಕೃತ ಸಾರೋಟಿನಲ್ಲಿ ಓಬವ್ವಳ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳ ಮೆರವಣಿಗೆ ಹೊರಟು ರಂಗಮಂದಿರ ತಲುಪಲಿದ್ದು, ಹನ್ನೊಂದು ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಛಲವಾದಿ ಜನಾಂಗದ ಮಂಜುನಾಥ್ ಮಾತನಾಡಿ ಒಬವ್ವಳ ಜಯಂತಿ ಮೂಲಕ ಛಲವಾದಿ ಜನಾಂಗದವರು ಒಂದೆಡೆ ಸೇರಿ ಸಂಘಟನೆಯಾಗೋಣ. ಇದರಿಂದ ಮುಂದಿನ ಪೀಳಿಗೆಗೆ ಪರಂಪರೆಯನ್ನು ಉಳಿಸಿದಂತಾಗುತ್ತದೆಂದು ಸಲಹೆ ನೀಡಿದರು.

ಕೃಷಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಛಲವಾದಿ ಸಮಾಜದ ವೆಂಕಟೇಶ್ ಮಾತನಾಡುತ್ತ ಒನಕೆ ಓಬವ್ವ ಜಯಂತಿಯಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರುಗಳನ್ನು ಗುರುತಿಸಿ ಸನ್ಮಾನಿಸೋಣ ಎಂದು ಹೇಳಿದರು.

ಪಿ.ವಿ.ಎಸ್.ಆಸ್ಪತ್ರೆಯ ಡಾ.ಪಿ.ವಿ.ಶ್ರೀಧರಮೂರ್ತಿ, ನ್ಯಾಯವಾದಿಗಳಾದ ಹೆಚ್.ಅಣ್ಣಪ್ಪಸ್ವಾಮಿ, ಎನ್.ಶಶಾಂಕ್, ಛಲವಾದಿ ಸಮಾಜದ ಮುಖಂಡರುಗಳಾದ ಬಾಳೆಕಾಯಿ ಶ್ರೀನಿವಾಸ್, ಎಸ್.ಎನ್.ರವಿಕುಮಾರ್, ನವೀನ್, ಶಿಕ್ಷಣ ಇಲಾಖೆಯ ನಾಗರಾಜ್, ಜಯರಾಂ ಕೆ. ಪರಮೇಶ್ವರಪ್ಪ ಪೂಜಾರ್, ಪ್ರದೀಪ್, ಸೋಮಣ್ಣ, ಹನುಮಂತಪ್ಪ, ಈರಜ್ಜನಹಟ್ಟಿ ತಿಪ್ಪೇಸ್ವಾಮಿ, ಜಗ್ಗಣ್ಣ, ರಂಗಸ್ವಾಮಿ ಸೇರಿದಂತೆ ಇನ್ನು ಅನೇಕರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

- Advertisement -  - Advertisement -  - Advertisement - 
Share This Article
error: Content is protected !!
";