ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ.
ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60 ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು.
ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರು ಇದಕ್ಕೆ ಏನು ಹೇಳಬೇಕು? ಎಂದರು . ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ.
ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ ನಿರ್ಧಾರವಾಗುತ್ತದೆ. 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದ್ದಾರೆ. 5495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದರು.
ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸು ಮಾಡಿದ್ದರು. ಒಟ್ಟು 11495 ಕೋಟಿಗಳನ್ನು ಕೊಟ್ಟರೆ. ಇದನ್ನು ನಾವು ಕೇಳಬೇಕು.
ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.