ಹಣಕಾಸು ಆಯೋಗ ಶಿಫಾರಸ್ಸಿನಂತೆ ವಿಶೇಷ ಅನುದಾನ ನೀಡಿದ್ದರೆ  ರಾಜಕೀಯ ಬಿಡುವೆ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ  ರಾಜಕೀಯ ಬಿಟ್ಟುಬಿಡುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 11495 ಕೋಟಿ ರೂಪಾಯಿಗಳನ್ನ ಕೊಟ್ಟಿದ್ದರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ ಎಂದರು. ಪ್ರಹ್ಲಾದ ಜೋಶಿ ಬಿಡುತ್ತಾರೆಯೇ ಕೇಳಿ ಎಂದು ಪ್ರಶ್ನಿಸಿದರು. ಸುಳ್ಳು ಹೇಳಿದ್ದನ್ನು ಕೇಳಿ ಅದನ್ನು ಬರೆಯುತ್ತೀರಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ  ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ ಸಿಎಂ ಚಾಟಿ ಬೀಸಿದರು.
ಬಿಜೆಪಿಯವರು ಗ್ಯಾರಂಟಿಗೆ ವಿರುದ್ದವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ.

ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಇರಬೇಕು. ಅದಕ್ಕೆ ಅವರನ್ನು ಬಡತನ ವಿರೋಧಿಗಳು ಎಂದು ಕರೆಯುವುದು. ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ.

ಬಿಜೆಪಿ ಪಕ್ಷ 600 ಭರವಸೆ ಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ. ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ.  ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ಲೆಕ್ಕ ಕೊಡುತ್ತಾರೆಯೇ ? ಎಂದು ಸವಾಲು ಹಾಕಿದರು.

 ವಕ್ಫ್ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ  ಎಂದು ಹೇಳಿದ ಮೇಲೂ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರೆ ರಾಜಕೀಯ ಅಲ್ಲವೇ ಎಂದರು.

 

- Advertisement -  - Advertisement - 
Share This Article
error: Content is protected !!
";