ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಮಹಿಳೆಯರು, ಮಕ್ಕಳು, ವಯೋವೃದ್ಧರಿಗೆ ಸಾಕಷ್ಟು ಜ್ವರ, ಕೆಮ್ಮು, ನೆಗಡಿ, ಶೀತ ಕಾಡುತ್ತಿದೆ. ಸೊಳ್ಳೆಗಳು ಹೆಚ್ಚಾಗಿ ಹಲವು ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿದ್ದು ಕೂಡಲೇ ಎಲ್ಲ ಗ್ರಾಮ ಪಂಚಾಯಿತಿಗಳು ಸೊಳ್ಳೆಗಳ ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕೆಡಿಪಿ ಸದಸ್ಯರು ತಾಲೂಕು ಪಂಚಾಯಿತಿ ಇಓ ಮತ್ತು ತಾಲೂಕು ಆರೋಗ್ಯ ಇಲಾಖೆಗೆ ಆಗ್ರಹ ಮಾಡಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಸಾಕಷ್ಟು ಜ್ವರ ಕೆಮ್ಮು ನೆಗಡಿ ಶೀತ ಮುಂತಾದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
ಆದರೆ ತಾಲೂಕು ಆಡಳಿತ ದಿವ್ಯ ನಿರ್ಲವ್ಯ ವಹಿಸಿರುವುದು ಕಂಡು ಬಂದಿರುತ್ತದೆ. ಇದರಿಂದ ಕಡು ಬಡವರು ಖಾಸಗಿ ಆಸ್ಪತ್ರೆ ಅವಲಂಬಿಸಬೇಕಾಗಿದೆ ಎಂದು ಅವರು ಆತಂಕ ವ್ಯಕ್ತ ಪಡಿಸಿದ್ದಾರೆ.
ತಾಲೂಕಿನ 33 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ನೈರ್ಮಲಿಕರಣ ಮಾಡುವಂತೆ ಸಂಬಂಧಪಟ್ಟಂತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಧ್ಯಕ್ಷರಿಗೆ ಸೂಚನೆ ನೀಡಬೇಕು.
ಹೆಚ್ಚಿನ ಜ್ವರ, ಶೀತ, ನೆಗಡಿ ಇರುವಂತ ಗ್ರಾಮಗಳಿಗೆ ವೈದ್ಯರ ವಿಶೇಷ ತಂಡ ಕಳುಹಿಸಿ ಸೂಕ್ತ ಚಿಕಿತ್ಸೆ ಮಾಡಬೇಕು ಎಂದು ಅವರು ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಸ್ ಸತೀಶ್ ಕುಮಾರ್ ಅವರಿಗೆ ಕೆಡಿಪಿ ಸದಸ್ಯರಾದ ವಕೀಲ ಸಿ.ಶಿವಕುಮಾರ್, ಗುರುಪ್ರಸಾದ್ ಮತ್ತು ಸಿದ್ದೇಶ್ ರವರು ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.