ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಭಾಗವಹಿಸಲಿಚ್ಛಿಸುವ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಲ್ಲಾ ಮಟ್ಟಗಳಿಗೂ ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು.
ಅಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ FID (Fruits Identification) ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ / ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕ ಆಗಿರುತ್ತದೆ.
ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.