ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶೇಷ ತನಿಖಾ ತಂಡದ ಮುಖ್ಯಸ್ಥ(ಎಸ್ಐಟಿ) ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ಕುಮಾರಸ್ವಾಮಿ ವಿರುದ್ಧ ಎಫ್ಐಆರ್‌ದಾಖಲಾಗಿದೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.
ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ.
ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.