ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್, ಪಂಪ್‌ಸೆಟ್ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಗೆ ೩೦ ದಿನಗಳ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ತರಬೇತಿ  ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ ಎಂದು ತರಬೇತಿ ಸಂಸ್ಥೆಯ  ನಿರ್ದೇಶಕ  ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

ಕನ್ನಡ ಓದಲು ಬರೆಯಲು ಬರುವ  ೧೮ ರಿಂದ ೪೫ ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿಗಾಗಿ ನವೆಂಬರ್ ೧೧ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

- Advertisement - 

ತರಬೇತಿಯನ್ನು ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನೀಡಲಾಗುವುದು.

ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ  ಸಂಖ್ಯೆ : ೦೮೧೬-೨೨೪೩೩೮೬, ೯೭೩೮೩೫೧೦೪೮, ೯೬೬೩೬೮೦೦೦೧ನ್ನು ಅರ್ಜಿ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";