ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನವೆಂಬರ್-9 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸುವರು.
ಹಿರಿಯ ವಕೀಲರಾದ ಎಂ.ವಿ.ರೇವಣಸಿದ್ದಯ್ಯರವರು “ಮಾನನಷ್ಟ ಮೊಕದ್ದಮೆ ಹಾಗೂ ನ್ಯಾಯಾಂಗ ನಿಂದನೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಎಂ.ಎನ್. ಅಹೋಬಳಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು.
ಪತ್ರಿಕೋದ್ಯಮಿಗಳು, ಹಿರಿಯ, ಕಿರಿಯ ಪತ್ರಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ವಿಶೇಷ ಉಪನ್ಯಾಸದ ಮಾಹಿತಿ ತಿಳಿದುಕೊಳ್ಳಲು ಸಂಘಟಕರು ಮನವಿ ಮಾಡಿದ್ದಾರೆ.